ಬಾಲಿಕಾ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವನಹಳ್ಳಿ, ಚಿಕ್ಕಮಗಳೂರು-ಇಲ್ಲಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕುಮಾರಿ. ಎಂ.ಸಿ. ಲೇಪನ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕನ್ನಡ ಚರ್ಚಾಸ್ಪರ್ಧೆಯಲ್ಲಿ ಚಿಕ್ಕಮಗಳೂರು ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು, ಉಡುಪಿಯಲ್ಲಿ ನಡೆದ ವಿಭಾಗಮಟ್ಟದಲ್ಲಿ ಪ್ರಥಮಸ್ಥಾನ ಪಡೆದಿರುತ್ತಾರೆ ಮತ್ತು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ. ಕು.ಲೇಪನ ಅವರ ಸಾಧನೆಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಹೃತ್ಪೂರ್ವಕವಾಗಿ ಅಭಿನಂದಿಸಿರುತ್ತಾರೆ.


