ಮೂಡಿಗೆರೆ: , ಆಟೋ ಮಗುಚಿ ಕೂಲಿ ಕಾರ್ಮಿಕರಿಗೆ ತೀವ್ರ ಗಾಯ
ಮೂಡಿಗೆರೆ ತಾಲೂಕಿನ ಕುಂಬರಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ಕೂಲಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿರುವ ಘಟನೆ ನಡೆದಿದೆ.
ಮೂಡಿಗೆರೆ ಮಾರ್ಗದಿಂದ ಬರುತ್ತಿದ್ದ ಬೈಕ್, ಹೊಸಕೆರೆ ಮಾರ್ಗದಿಂದ ಬರುತ್ತಿದ್ದ ಆಟೋಗೆ ಕುಂಬರಡಿ ಗ್ರಾಮದ ಬಸ್ ನಿಲ್ದಾಣದ ಸಮೀಪ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಆಟೋ ಮಗುಚಿ ಬಿದ್ದಿದ್ದು, ಗಾಯಗೊಂಡವರನ್ನು ಪ್ರಥಮ ಚಿಕಿತ್ಸೆಗೆ ಸತ್ತಿಗನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿ ಮುಂದಿನ ತಪಾಸಣೆಗೆ ಮಂಗಳೂರು ಮತ್ತು ಚಿಕ್ಕಮಗಳೂರಿನ ಆಸ್ಪತ್ತ್ರೆಗಳಿಗೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದ್ದೆ
ಅಪಘಾತದ ಬಳಿಕ ಬೈಕ್ ಸವಾರರು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂಚಾರಿ ಪೊಲೀಸರು ಆಟೋ ಮತ್ತು ಬೈಕ್ ಅನ್ನು ಠಾಣೆಗೆ ತೆಗೆದುಕೊಂಡು ಹೋಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


