ಮೂಡಿಗೆರೆ ತಾಲ್ಲೂಕು ..ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘದ ಮತದಾರರಿಗೆ ಅಭಿನಂದನಾ ಸಮಾರಂಭ
ಮೂಡಿಗೆರೆ ತಾಲ್ಲೂಕು ವ್ಯವಸಾಯ ಉತ್ಪನ್ನ ಮಾರುಕಟ್ಟೆ ಸಹಕಾರ ಸಂಘ ನಿಯಮಿತದ ಇತ್ತೀಚಿನ ಸಹಕಾರಿ ಚುನಾವಣೆಯಲ್ಲಿ ಭಾಗವಹಿಸಿ ಮತದಾನ ಮಾಡಿದ ಮತದಾರ ಬಂಧುಗಳು, ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತ ಬಂಧುಗಳಿಗೆ ಅಭಿನಂದನಾ ಸಮಾರಂಭವನ್ನು ಚುನಾಯಿತ ಪ್ರತಿನಿಧಿಗಳು ಹಾಗೂ ಎನ್ಡಿಎ ಮೈತ್ರಿಕೂಟದ ವತಿಯಿಂದ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚುನಾಯಿತ ಪ್ರತಿನಿಧಿಗಳು, ಸಂಘದ ಅಭಿವೃದ್ಧಿಗೆ ಮತದಾರರು ನೀಡಿದ ಬೆಂಬಲ ಮತ್ತು ವಿಶ್ವಾಸಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. ಸಹಕಾರ ಸಂಘವನ್ನು ರೈತರು ಹಾಗೂ ವ್ಯಾಪಾರಿಗಳ ಹಿತದೃಷ್ಟಿಯಿಂದ ಪಾರದರ್ಶಕವಾಗಿ, ಸಮರ್ಪಕವಾಗಿ ನಡೆಸಲಾಗುವುದು ಎಂಬ ಭರವಸೆಯನ್ನು ನೀಡಿದರು.
ಎನ್ಡಿಎ ಮೈತ್ರಿಕೂಟದ ಮುಖಂಡರು ಮಾತನಾಡಿ, ಸಂಘದ ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ರೈತರ ಆರ್ಥಿಕ ಶಕ್ತಿಕರಣಕ್ಕೆ ಸಂಘವನ್ನು ಇನ್ನಷ್ಟು ಬಲಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು. ಚುನಾವಣೆಯಲ್ಲಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರ ಸೇವೆಯನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಸ್ಮರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು, ಎನ್ಡಿಎ ಮೈತ್ರಿಕೂಟದ ಮುಖಂಡರು, ಕಾರ್ಯಕರ್ತರು, ಮತದಾರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾರಂಭಕ್ಕೆ ಶೋಭೆ ತಂದರು.
ಕಾರ್ಯಕ್ರಮದಲ್ಲಿ
ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ಶೆಟ್ಟಿ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮಣ್ ಗೌಡ, ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಎಂ.ಎಲ್.ಕಲ್ಲೇಶ್, ಉಪಾಧ್ಯಕ್ಷ ಕೆ.ಬಿ.ಗಣೇಶ್, ನಿರ್ದೇಶಕರಾದ ಟಿಎಂ.ಗಜೇಂದ್ರ, ವಿ.ಕೆ.ಶಿವೇಗೌಡ, ಪಿ.ಜಿ.ಅನುಕುಮಾರ್, ಎಂ.ಕೆ.ಚಂದ್ರೇಶ್, ಪುಟ್ಟಮ್ಮ ಚಂದ್ರೇಗೌಡ, ಬಿ.ಎಲ್.ವಿದ್ಯಾರಾಜು, ಎಂ.ಎಸ್.ಪ್ರಸನ್ನ, ಜಿ.ಎಂ.ಪ್ರಸನ್ನ, ಶೇಖರ್ ಬಂಗೇರಾ, ರಮೇಶ್ ಕುನ್ನಳ್ಳಿ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಿ.ಕೆ.ದಿವಾಕರ್, ನಿರ್ದೇಶಕಿ ಎ.ಕೆ.ಭಾರತೀ, ಮುಖಂಡರಾದ ಜ್ವಾಲನಯ್ಯ ಕಳಸ, ಎಂ.ಆರ್.ಜಗದಿಶ್, ದೀಪಕ್ ದೊಡ್ಡಯ್ಯ, ಜೆ.ಎ.ರಘು, ಬಿ.ಎನ್.ಜಯಂತ್, ಮನೋಜ್ ಹಳೆಕೋಟೆ, ಡಿ.ಬಿ.ಅಶೋಕ್, ಎಂ.ಸಿ.ಹೂವಪ್ಪ, ಲೋಹಿತ್ ಮತ್ತಿತರರಿದ್ದರು.
ವರದಿ =ಕಿರಣ್ ಬೆಟ್ಟಗೆರೆ . ಸಂಪಾದಕರು. ವಿಸ್ಮಯ ವರ್ಲ್ಡ್


